ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಲಾಗಿದೆ. ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಬಂದಿದ್ದು, ವ್ಯಕ್ತಿಯೊಬ್ಬರು ಕರೆ ಮಾಡಿ ಮೋದಿಯನ್ನು ಕೊಲ್ಲಲು ಸಂಚು ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.ಬೆದರಿಕೆ ಕರೆ ಸ್ವೀಕರಿಸಿದ ನಂತರ, ಪೊಲೀಸರು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಮಾಹಿತಿಯ ಪ್ರಕಾರ, ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಬುಧವಾರ ರಾತ್ರಿ 9 ಗಂಟೆಗೆ ಈ ಫೋನ್ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ಪ್ರಧಾನಿ ಮೋದಿಯವರನ್ನು ಕೊಲ್ಲಲು ಪಿತೂರಿ ನಡೆದಿದೆ ಎಂದು ಹೇಳಿಕೊಂಡಿದ್ದಾನೆ. ಈ ಪ್ರಕರಣದ ಬಗ್ಗೆ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆದರಿಕೆ ಹಾಕಿದ ವ್ಯಕ್ತಿ ಮಹಿಳೆ ಎಂದು ತಿಳಿದುಬಂದಿದೆ.
ಈ ಹಿಂದೆ ಬಾಲಿವುಡ್ ನಟರಾದ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಅವರಿಗೂ ಫೋನ್ ಕರೆಗಳ ಮೂಲಕ ಕೊಲೆ ಬೆದರಿಕೆ ಬಂದಿತ್ತು. ಶಾರುಖ್ ಖಾನ್ ಅವರಿಗೆ ರಾಯ್ಪುರದಿಂದ ಬೆದರಿಕೆ ಕರೆ ಬಂದಿದೆ. ಇದಾದ ನಂತರ ಪೊಲೀಸರು ರಾಯ್ಪುರಕ್ಕೆ ತೆರಳಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಮುಂಬೈನ ಟ್ರಾಫಿಕ್ ಕಂಟ್ರೋಲ್ ರೂಂನಲ್ಲಿ ನಟ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಸಂದೇಶ ಬಂದಿತ್ತು