alex Certify BIG NEWS: ಬಡವರಿಗೆ ಕೈಗೆಟುಕುವಂತೆ ವಸತಿ ಸೌಲಭ್ಯ ಒದಗಿಸಲು 1.19 ಕೋಟಿ ಮನೆ ನಿರ್ಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಡವರಿಗೆ ಕೈಗೆಟುಕುವಂತೆ ವಸತಿ ಸೌಲಭ್ಯ ಒದಗಿಸಲು 1.19 ಕೋಟಿ ಮನೆ ನಿರ್ಮಾಣ

ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆ(ನಗರ) ದೇಶದ ಜನರ ಜೀವನವನ್ನು ಪರಿವರ್ತಿಸಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಸಚಿವಾಲಯದ ಸಾಧನೆ ಕುರಿತು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ 9 ವರ್ಷಗಳಲ್ಲಿ ಸರ್ಕಾರವು 1 ಕೋಟಿ 19 ಲಕ್ಷ ಮನೆಗಳನ್ನು ಮಂಜೂರು ಮಾಡಿದೆ ಮತ್ತು 1 ಕೋಟಿಗೂ ಹೆಚ್ಚು ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಈಗಾಗಲೇ 79 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರದಲ್ಲಿ 2004ರಿಂದ 2014ರವರೆಗೆ ಕೇವಲ 13 ಲಕ್ಷ ಮನೆಗಳು ಮಂಜೂರಾಗಿದ್ದು, 8 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2015 ರಲ್ಲಿ ಯೋಜನೆಯನ್ನು ಪ್ರಾರಂಭಿಸಿದರು, 2024 ರ ವೇಳೆಗೆ ನಗರ ಬಡವರಿಗೆ ಕೈಗೆಟುಕುವ ವಸತಿ ಒದಗಿಸುವ ಉದ್ದೇಶವನ್ನು ಹೊಂದಿದ್ದರು ಎಂದು ಹೇಳಿದ್ದಾರೆ.

ಪಿಎಂ ಸ್ವನಿಧಿ ಯೋಜನೆಯ ಸಾಧನೆಗಳ ಕುರಿತು ಮಾತನಾಡಿದ ಅವರು, ಇದು ಪ್ರಧಾನಿ ಮೋದಿಯವರಿಂದ ಪರಿಕಲ್ಪನೆ. ವಿಶೇಷವಾಗಿ ಕೋವಿಡ್ ಅವಧಿಯಲ್ಲಿ ಅನುಷ್ಠಾನಗೊಂಡ ಒಂದು ಯೋಜನೆಯಾಗಿದೆ. ಸ್ವನಿಧಿ ಯೋಜನೆಯು ಜನಜೀವನವನ್ನು ಬದಲಿಸಿದ ಕಾರಣಕ್ಕಾಗಿ ಯಶಸ್ವಿಯಾಗಿದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...