ಪಿಎಂ ಕೇರ್ಸ್ ಫಂಡ್ನಲ್ಲಿರುವ ಖಾತೆಗಳು, ಅದರ ಚಟುವಟಿಕೆ ಹಾಗೂ ವೆಚ್ಚದ ವಿವರಗಳನ್ನು ಬಹಿರಂಗಪಡಿಸಲು ಹಾಗೂ ಅದನ್ನು ಸಿಎಜಿ ಆಡಿಟ್ಗೆ ಮುಕ್ತಗೊಳಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಹಾಗೂ ಬಿ.ಆರ್. ಗವಾಯಿ ನೇತೃತ್ವದ ಪೀಠವು ಅರ್ಜಿದಾರರಿಗೆ ಅಲಹಾಬಾದ್ ಹೈಕೋರ್ಟ್ ಸಂಪರ್ಕಿಸುವಂತೆ ಹಾಗೂ ಈ ವಿಷಯದಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸುವಂತೆ ಕೇಳಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ ಕಾಮತ್, ಪರಿಹಾರದ ವ್ಯಾಪ್ತಿಯು ಸಂಪೂರ್ಣ ಭಿನ್ನವಾಗಿದೆ. ಪಿಎಂ ಕೇರ್ಸ್ ನಿಧಿಯ ಮಾನ್ಯತೆ ಹಾಗೂ ಖಾತೆಯ ಚಟುವಟಿಕೆಗಳನ್ನು ಬಹಿರಂಗಪಡಿಸುವಂತೆ ಕೋರಿದರು.