alex Certify ಪಿಎಂ ಕೇರ್ಸ್ ಫಂಡ್ ಸರ್ಕಾರ ನಿಯಂತ್ರಿಸಲ್ಲ: ದೆಹಲಿ ಹೈಕೋರ್ಟ್‌ಗೆ ಕೇಂದ್ರದ ಅಫಿಡವಿಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಂ ಕೇರ್ಸ್ ಫಂಡ್ ಸರ್ಕಾರ ನಿಯಂತ್ರಿಸಲ್ಲ: ದೆಹಲಿ ಹೈಕೋರ್ಟ್‌ಗೆ ಕೇಂದ್ರದ ಅಫಿಡವಿಟ್

ನವದೆಹಲಿ: ಪಿಎಂ ಕೇರ್ಸ್ ಫಂಡ್ ಅನ್ನು ಸ್ವತಂತ್ರ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿ ಸ್ಥಾಪಿಸಲಾಗಿದೆ. ಅದರ ಕಾರ್ಯನಿರ್ವಹಣೆಯ ಮೇಲೆ ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಗೆ ನೇರ ಅಥವಾ ಪರೋಕ್ಷ ನಿಯಂತ್ರಣವಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಪಿಎಂ ಕೇರ್ಸ್ ನಿಧಿಯ ಬಗ್ಗೆ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಸಲ್ಲಿಸಿದ ವಿವರವಾದ ಅಫಿಡವಿಟ್‌ ನಲ್ಲಿ, ಹೈಕೋರ್ಟ್‌ ಗೆ ಕೇಂದ್ರ, ಟ್ರಸ್ಟ್‌ನ ಕಾರ್ಯನಿರ್ವಹಣೆಯಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ರೀತಿಯಲ್ಲಿ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರಗಳ ಯಾವುದೇ ನಿಯಂತ್ರಣವಿಲ್ಲ ಎಂದು ಹೇಳಲಾಗಿದೆ.

ಪಿಎಂ ಕೇರ್ಸ್ ಫಂಡ್ ಸ್ವಯಂಪ್ರೇರಿತ ದೇಣಿಗೆಗಳನ್ನು ಒಳಗೊಂಡಿರುತ್ತದೆ. ಸರ್ಕಾರದ ಬೆಂಬಲವನ್ನು ಸ್ವೀಕರಿಸುವುದಿಲ್ಲ. ಸರ್ಕಾರದ ಬಜೆಟ್ ಮೂಲಗಳಿಂದ ಅಥವಾ ಸಾರ್ವಜನಿಕ ವಲಯದ ಸಂಸ್ಥೆಗಳ ಬ್ಯಾಲೆನ್ಸ್ ಶೀಟ್‌ ಗಳಿಂದ ಕೊಡುಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಅಫಿಡವಿಟ್ ಹೇಳಿದೆ.

ಮಾಹಿತಿ ಹಕ್ಕು ಕಾಯಿದೆಯ ಸೆಕ್ಷನ್ 2(h)(d) ರ ಅರ್ಥದಲ್ಲಿ PM ಕೇರ್ಸ್ “ಸಾರ್ವಜನಿಕ ಪ್ರಾಧಿಕಾರ” ಅಲ್ಲ. ಆದ್ದರಿಂದ RTI ಕಾಯಿದೆಯ ನಿಬಂಧನೆಗಳನ್ನು ಅದರ ಮೇಲೆ ಅನ್ವಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಜುಲೈ 2022 ರಲ್ಲಿ ಹೈಕೋರ್ಟ್ ತನ್ನ ಹಿಂದಿನ ಪ್ರತಿಕ್ರಿಯೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಂತರ ಕೇಂದ್ರವು ಪ್ರತಿಕ್ರಿಯೆಯನ್ನು ಸಲ್ಲಿಸಿದೆ ಎಂಬುದನ್ನು ಗಮನಿಸಬಹುದಾಗಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, ಸರ್ಕಾರದ ಹಿರಿಯ ಅಧಿಕಾರಿಗಳು ರಾಜ್ಯಸಭಾ ಸದಸ್ಯರಿಗೆ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾರೆ. ಪಿಎಂ ಕೇರ್ಸ್ ನಿಧಿಯನ್ನು ಸರ್ಕಾರಿ ನಿಧಿ ಎಂದು ಬಿಂಬಿಸಲಾಗಿದೆ ಎಂದರು.

ಸಾರ್ವಜನಿಕ ಕಚೇರಿಯ ಪದಾಧಿಕಾರಿಗಳನ್ನು ಹೊಂದಿರುವ ಟ್ರಸ್ಟಿಗಳ ಮಂಡಳಿಯ ಸಂಯೋಜನೆಯು ಕೇವಲ ಆಡಳಿತಾತ್ಮಕ ಅನುಕೂಲಕ್ಕಾಗಿ. ಪಿಎಂ ಕೇರ್ಸ್ ಫಂಡ್ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತದೆ. ಚಾರ್ಟರ್ಡ್ ಅಕೌಂಟೆಂಟ್‌ ನಿಂದ ಆಡಿಟ್ ಮಾಡಲ್ಪಟ್ಟಿದೆ. ಅವರ ವರದಿಗಳು pmcares.gov.in ವೆಬ್‌ಸೈಟ್‌ನಲ್ಲಿ ಲಭ್ಯವಿವೆ. ಪಿಎಂ ಕೇರ್ಸ್ ನಿಧಿಯನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(ಪಿಎಂಎನ್‌ಆರ್‌ಎಫ್) ಮಾದರಿಯಲ್ಲಿ ನಿರ್ವಹಿಸಲಾಗುತ್ತದೆ ಎಂದು ಅಫಿಡವಿಟ್ ಹೇಳಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...