ಧಾರವಾಡ : 2023-24 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ವಿಮಾ ಸಂಸ್ಥೆಯವರಿಂದ 743 ಪ್ರಸ್ತಾವನೆಗಳು ತಿರಸ್ಕೃತಗೊಂಡಿವೆ.
ಮುಂಗಾರು 99, ಹಿಂಗಾರು 644 ಸೇರಿ ಒಟ್ಟು 743 ವಿಮೆ ಪ್ರಸ್ತಾವನೆಗಳು ತಿರಸ್ಕøತಗೊಂಡಿದ್ದು, ಬೆಳೆ ವಿಮೆ ತಿರಸ್ಕøತ ಪ್ರಸ್ತಾವನೆಗಳ ರೈತರ ಪಟ್ಟಿಯನ್ನು ಗ್ರಾಮ ಪಂಚಾಯತ, ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪ್ರದರ್ಶಿಸಲಾಗಿದೆ.
ಆಕ್ಷೇಪಣೆಗಳಿದ್ದಲ್ಲಿ ಸಂಬಂದಪಟ್ಟ ರೈತರು ಫೆಬ್ರವರಿ 27, 2025 ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ 2023-24ರ ಪಹಣಿ ಪತ್ರಿಕೆಯಲ್ಲಿ (ಆರ್.ಟಿ.ಸಿ) ವಿಮೆಗೆ ನೋಂದಾಯಿಸಿದ ಬೆಳೆ ನಮೂದು ಪ್ರತಿ, ವಿಮೆ ಮಾಡಿಸಿದ ಬೆಳೆಗೆ ಬೆಂಬಲ ಬೆಲೆ ಪ್ರಯೋಜನ ಪಡೆದಲ್ಲಿ ರಶೀದಿ ಹಾಗೂ ವಿಮೆ ನೋಂದಾಯಿತ ಬೆಳೆಯ ಉತ್ಪನ್ನವನ್ನು ಎ.ಪಿ.ಎಂ.ಸಿ ಮಾರುಕಟ್ಟೆಗೆ ಮಾರಾಟ ಮಾಡಿದಲ್ಲಿ ದಾಖಲೆಯೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ರಾಜಶೇಖರ ಅಣಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.