ಕೋವಿಡ್ ಕಾಲದಲ್ಲಿ ಬಡವರ ಹಸಿವು ನೀಗಿಸಿದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಬಗ್ಗೆ ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ಐಎಂಎಫ್ ಶ್ಲಾಘಿಸಿದೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ಆಹಾರ ಒದಗಿಸುವ ಮೂಲಕ ಕಡುಬಡತನದಿಂದ ದೇಶವಾಸಿಗಳನ್ನು ಪಾರು ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.
ವರದಿಯ ಪ್ರಕಾರ ಭಾರತದಲ್ಲಿ ದಿನಕ್ಕೆ 142 ರೂಪಾಯಿಗಿಂತ ಕಡಿಮೆ ಸರಾಸರಿ ಆದಾಯ ಇರುವ ಕಡುಬಡವರ ಸಂಖ್ಯೆ ಕೊರೋನಾ ಬಿಕ್ಕಟ್ಟಿನ 2020ರ ವರ್ಷದಲ್ಲಿಯೂ ಕೊರೋನಾ ಪೂರ್ವ 2019ರ ಮಟ್ಟದಲ್ಲಿ ಉಳಿದುಕೊಂಡಿದೆ. ಗರೀಬ್ ಕಲ್ಯಾಣ ಯೋಜನೆ ಬಡತನವನ್ನು ದೂರ ಮಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.
2020 ರ ಮಾರ್ಚ್ ನಲ್ಲಿ ಅನ್ನ ಯೋಜನೆ ಆರಂಭಿಸಿ ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರಧಾನ್ಯಗಳನ್ನು ಉಚಿತವಾಗಿ ವಿತರಿಸಲಾಗಿದೆ. 80 ಕೋಟಿ ಜನ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.