ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಖುಷಿ ಸುದ್ದಿಯೊಂದಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10 ನೇ ಕಂತು ಪಡೆಯುವ ಫಲಾನುಭವಿಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಪಿಎಂ ಕಿಸಾನ್ ಯೋಜನೆಯ ಹಣ, ಡಿಸೆಂಬರ್ 15 ಮತ್ತು 25 ರ ನಡುವೆ ಫಲಾನುಭವಿಗಳ ಖಾತೆಗೆ ಸಂದಾಯವಾಗುವ ಸಾಧ್ಯತೆಯಿದೆ.
ಸಣ್ಣ ಮತ್ತು ಅತಿಸಣ್ಣ ರೈತರನ್ನು ಗಮನದಲ್ಲಿಟ್ಟುಕೊಂಡು ಮೋದಿ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ ರೈತರಿಗೆ ವರ್ಷದಲ್ಲಿ 3 ಕಂತುಗಳಲ್ಲಿ 6,000 ರೂಪಾಯಿ ನೀಡುತ್ತಿದೆ. ಪ್ರತಿ 4 ತಿಂಗಳಿಗೊಮ್ಮೆ ರೈತರ ಖಾತೆಗೆ 2,000 ರೂಪಾಯಿ ಸಂದಾಯವಾಗುತ್ತದೆ. ಈವರೆಗೆ ರೈತರ ಖಾತೆಗೆ 9 ಕಂತುಗಳಲ್ಲಿ ಹಣ ರವಾನೆಯಾಗಿದೆ. ಈಗ ಹತ್ತನೇ ಕಂತಿನ ಹಣ ಡಿಸೆಂಬರ್ ತಿಂಗಳಲ್ಲಿ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಲಿದೆ.
ದೇಶದ 11.37 ಕೋಟಿ ರೈತರ ಖಾತೆಗೆ ಹಣ ಬರುತ್ತಿದೆ. ಕೇಂದ್ರ ಸರ್ಕಾರವು ಕಳೆದ ವರ್ಷ ಡಿಸೆಂಬರ್ 25 ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣವನ್ನು ವರ್ಗಾಯಿಸಿತ್ತು. ಇಲ್ಲಿಯವರೆಗೆ, ಸರ್ಕಾರವು ದೇಶದ 11.37 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 1.58 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ನೇರವಾಗಿ ವರ್ಗಾಯಿಸಿದೆ.
ಮೊದಲು ಪಿಎಂ ಕಿಸಾನ್‌ನ ಅಧಿಕೃತ ವೆಬ್‌ಸೈಟ್ https://pmkisan.gov.in/ ಗೆ ಹೋಗಬೇಕು. ಇಲ್ಲಿ ಬಲಭಾಗದಲ್ಲಿ ಫಾರ್ಮರ್ಸ್ ಕಾರ್ನರ್ ಆಯ್ಕೆ ಮಾಡಬೇಕು. ಫಲಾನುಭವಿಗಳ ಪಟ್ಟಿಯ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಹೊಸ ಪುಟ ತೆರೆಯುತ್ತದೆ. ಹೊಸ ಪುಟದಲ್ಲಿ, ನಿಮ್ಮ ರಾಜ್ಯ, ಜಿಲ್ಲೆ, ಉಪ ಜಿಲ್ಲೆ, ಬ್ಲಾಕ್ ಮತ್ತು ಗ್ರಾಮದ ವಿವರಗಳನ್ನು ನೀವು ಭರ್ತಿ ಮಾಡಬೇಕು. ಇದರ ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮಗೆ ಎಲ್ಲಾ ಫಲಾನುಭವಿ ರೈತರ ಪಟ್ಟಿ ಸಿಗಲಿದೆ.