alex Certify ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಅರ್ಹ ಫಲಾನುಭವಿಗಳು ಆ.15ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಅರ್ಹ ಫಲಾನುಭವಿಗಳು ಆ.15ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ

ಬಳ್ಳಾರಿ: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಕೆವೈಸಿ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.xn--in-muh8o/ ಭೇಟಿ ನೀಡಿ ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಪ್ರಕ್ರಿಯೆ ಕೆವೈಸಿ ಪೂರ್ಣಗೊಳಿಸಬೇಕು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ಸೈಬರ್ಗಳಲ್ಲಿ ಕೆವೈಸಿ ಮಾಡಲು ಅವಕಾಶವಿರುತ್ತದೆ.

ಆದ್ದರಿಂದ ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿ ರೈತರು .15ರೊಳಗೆ ಕೆವೈಸಿ ಮಾಡಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ತಾಲೂಕು ಕಚೇರಿ ಆವರಣದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಹಾಗೂ ದೂ.08392-276224ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...