ಪ್ರಧಾನ ಮಂತ್ರಿ ನರೇಂದ್ರ ಮೋದಿ, ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ 9 ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ. 9ನೇ ಕಂತಿನ 2000 ರೂಪಾಯಿಗಳು ರೈತರ ಖಾತೆಗೆ ಬರಲು ಶುರುವಾಗಿವೆ. ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇದುವರೆಗೆ 12 ಕೋಟಿಗೂ ಅಧಿಕ ರೈತರ ಬ್ಯಾಂಕ್ ಖಾತೆಗಳಿಗೆ ಹಣ ನೇರವಾಗಿ ಹೋಗಿದೆ.
ಈ ಯೋಜನೆಯ ಹಣ ಇದುವರೆಗೆ ನಿಮ್ಮ ಖಾತೆಗೆ ಬಂದಿಲ್ಲವಾದರೆ ಚಿಂತಿಸುವ ಅಗತ್ಯವಿಲ್ಲ. ತಕ್ಷಣ ಕೇಂದ್ರ ಕೃಷಿ ಸಚಿವಾಲಯಕ್ಕೆ ದೂರು ನೀಡಬಹುದು. ಮೊದಲು ಸ್ಥಳೀಯ ಕೃಷಿ ಅಧಿಕಾರಿಯನ್ನು ಸಂಪರ್ಕಿಸಬೇಕು. ಒಂದು ವೇಳೆ ಅಲ್ಲಿ ಕೆಲಸ ಆಗದೆ ಹೋದಲ್ಲಿ ಸಹಾಯವಾಣಿಗೆ ಕರೆ ಮಾಡಬಹುದು. ಸಹಾಯವಾಣಿ ಸೋಮವಾರದಿಂದ ಶುಕ್ರವಾರದವರೆಗೆ ತೆರೆದಿರುತ್ತದೆ. pmkisan-ict@gov.in ಇ-ಮೇಲ್ ನಲ್ಲಿಯೂ ದೂರು ನೀಡಬಹುದು. 011-23381092 ಸಂಖ್ಯೆಗೆ ಕರೆ ಮಾಡಿ, ಇದ್ರ ಬಗ್ಗೆ ಮಾಹಿತಿ ಪಡೆಯಬಹುದು.
ಕೃಷಿ ಸಚಿವಾಲಯದ ಪ್ರಕಾರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವು ರೈತರ ಬ್ಯಾಂಕ್ ಖಾತೆಗೆ ಹೋಗಿಲ್ಲವೆಂದಾದ್ರೆ ತಕ್ಷಣ ಕ್ರಮಕೈಗೊಳ್ಳಲಾಗುವುದು. ರೈತರ ಖಾತೆಗೆ ಹಣ ತಲುಪಲು ತಾಂತ್ರಿಕ ಸಮಸ್ಯೆ ಇದ್ದಲ್ಲಿ ಶೀಘ್ರ ಪರಿಹರಿಸಬೇಕೆಂದು ಸಚಿವಾಲಯ ಹೇಳಿದೆ.
ಪಿಎಂ ಕಿಸಾನ್ ಟೋಲ್ ಫ್ರೀ ಸಂಖ್ಯೆ: 18001155266,
ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ: 155261
ಪಿಎಂ ಕಿಸಾನ್ ಲ್ಯಾಂಡ್‌ಲೈನ್ ಸಂಖ್ಯೆಗಳು: 011—23381092, 23382401
ಪಿಎಂ ಕಿಸಾನ್ ಹೊಸ ಸಹಾಯವಾಣಿ: 011-24300606
ಪಿಎಂ ಕಿಸಾನ್ ಮತ್ತೊಂದು ಸಹಾಯವಾಣಿ : 0120-6025109
ಈ ಎಲ್ಲ ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.