
ನವದೆಹಲಿ: ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಜೂನ್ 18ರಂದು ಮೊದಲ ಬಾರಿಗೆ ವಾರಣಾಸಿಗೆ ಭೇಟಿ ನೀಡಲಿದ್ದು, ಇದೇ ಸಂದರ್ಭದಲ್ಲಿ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ 20 ಸಾವಿರ ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಹಿಂದಿನ ಎರಡು ಅವಧಿಯಲ್ಲಿಯೂ ಮೋದಿ ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಿದ್ದರು. ರೈತರ ಹಿತದೃಷ್ಟಿಯಿಂದ ಹಲವು ಪ್ರಮುಖ ಯೋಜನೆ ಅನುಷ್ಠಾನಗೊಳಿಸಿದ್ದಾರೆ. ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಪಿಎಂ ಕಿಸಾನ್ ಹಣ ಬಿಡುಗಡೆಗೆ ಮೊದಲ ಸಹಿ ಹಾಕಿದ್ದೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ದೇಶದ 9.26 ಕೋಟಿ ರೈತರ ಖಾತೆಗೆ ಜೂನ್ 18ರಂದು ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಜಮಾ ಮಾಡಲಾಗುವುದು.