alex Certify ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳೇ ಗಮನಿಸಿ : `ಇ-ಕೆವೈಸಿ’ ಮಾಡಿಸಲು ಇಂದೇ ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳೇ ಗಮನಿಸಿ : `ಇ-ಕೆವೈಸಿ’ ಮಾಡಿಸಲು ಇಂದೇ ಕೊನೆಯ ದಿನ

ಬೆಂಗಳೂರು  : ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಕೃಷಿ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿತ ರೈತರಿಗೆ ಇ-ಕೆವೈಸಿ ಮಾಡಿಸಲು ಜುಲೈ 07ರ ಇಂದು ಕೊನೆಯ ದಿನವಾಗಿದೆ.

ಪಿ.ಎಂ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ನೋಂದಾಯಿತ ರೈತರು ಇ-ಕೆವೈಸಿ ಮಾಡುವುದು ಅತೀ ಅವಶ್ಯಕವಾಗಿದ್ದು, 14ನೇ ಕಂತಿನ ನೆರವಿನ ಹಣ ವರ್ಗಾವಣೆ ಇ-ಕೆವೈಸಿ ಮಾಡಿಸಿರುವ ಮತ್ತು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿರುವ ಫಲಾನುಭವಿಗಳಿಗೆ ಮಾತ್ರ ಬರುತ್ತದೆ. ಈ ಯೋಜನೆಯಡಿ ಇ-ಕೆವೈಸಿ ಮಾಡಿಸಲು ಇಂದು ಕೊನೆಯ ದಿನವಾಗಿದೆ.

ರಾಜ್ಯ ಸರ್ಕಾರ ಮುಖ ದೃಢೀಕರಣ ಘೋಷಿಸಿದೊಂದಿಗೆ (ಫೇಸ್ ಅಥೆಂಟಿಕೇಷನ್ ಆಪ್ ಇ–ಕೆವೈಸಿ) ಪಿ.ಎಂ. ಕಿಸಾನ್ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದೆ. ರೈತರು ಈ ಅಪ್ಲಿಕೇಶನನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್ಲೋಡ್ ಮಾಡಿ ಇ-ಕೆವೈಸಿ ಮಾಡಿಕೊಳ್ಳಬಹುದು. ಇತರೆ ರೈತರು ಇ-ಕೆವೈಸಿ ಮಾಡಿಸಲು ಸಹಾಯ ಮಾಡಬಹುದು. ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಅಥವಾ ಸೇವಾ ಸಿಂಧು ಸೆಂಟರ್‌ಗಳಿಗೆ ಭೇಟಿ ನೀಡಿ ಅಗತ್ಯ ಸೇವೆ ಪಡೆಯಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...