ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಈ ಯೋಜನೆಯಲ್ಲಿ ವಂಚನೆ ತಡೆಯಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕಿಸಾನ್ ಯೋಜನೆ ನೋಂದಣಿಗೆ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಲಾಗಿದೆ.
ʼವಾಯು ಮಾಲಿನ್ಯʼದಿಂದ ವೀರ್ಯದ ಸಂಖ್ಯೆ ಇಳಿಕೆ; ಅಧ್ಯಯನದಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ
ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿದ ನಂತರವೇ ಈ ಯೋಜನೆಯ ಪ್ರಯೋಜನ ಸಿಗಲಿದೆ. ಹೊಸ ನೋಂದಣಿಗೆ ಪಡಿತರ ಚೀಟಿ ನೀಡುವುದು ಕಡ್ಡಾಯ.
ನೋಂದಣಿಗೆ, ಬ್ಯಾಂಕ್ ಖಾತೆ ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯ. ದಾಖಲೆಗಳನ್ನು ಪಿಎಂ ಕಿಸಾನ್ ವೆಬ್‌ಸೈಟ್ pmkisan.gov.in ನಲ್ಲಿ ಅಪ್‌ಲೋಡ್ ಮಾಡಬೇಕು.