ಬಳ್ಳಾರಿ : ಜಿಲ್ಲೆಯ ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.in ಗೆ ಭೇಟಿ ನೀಡಿ ಇ-ಕೆವೈಸಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಪ್ರಕ್ರಿಯೆ ಇ-ಕೆವೈಸಿ ಪೂರ್ಣಗೊಳಿಸಬೇಕು.
ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮಒನ್ ಸೇವಾ ಕೇಂದ್ರಗಳಲ್ಲಿ ಅಥವಾ ಗ್ರಾಹಕರ ಸೇವಾ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶವಿರುತ್ತದೆ.
ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಬೇಕಾಗಿರುತ್ತದೆ. ಇಲ್ಲವಾದಲ್ಲಿ ಇ-ಕೆವೈಸಿ ಮಾಡಸದಿರುವ ರೈತರಿಗೆ ಮುಂದಿನ 14 ನೇ ಕಂತಿನ ಅನುದಾನ ವರ್ಗಾವಣೆಯಾಗುವುದಿಲ್ಲ. ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ರೈತರು ಇ-ಕೆವೈಸಿ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.