alex Certify ನೆಹರು, ಇಂದಿರಾ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೆಹರು, ಇಂದಿರಾ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾಗಾಂಧಿಯವರ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣಕ್ಕೆ ‘ವಂದನಾ ನಿರ್ಣಯ’ಕ್ಕೆ ಉತ್ತರಿಸಿದ ಮೋದಿ, ನೆಹರು, ಇಂದಿರಾ ಗಾಂಧಿ ಅವರು ಭಾರತದ ಜನರನ್ನು ಜನರಂತೆ ನೋಡಲಿಲ್ಲ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಿಂದ ನೆಹರು ಮಾಡಿದ ಭಾಷಣವನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ ಮಾಜಿ ಪ್ರಧಾನಿ ನೆಹರು, ಇಂದಿರಾ ಗಾಂಧಿ ಅವರು ಭಾರತೀಯರನ್ನು ಸೋಮಾರಿಗಳು ಎಂದು ಪರಿಗಣಿಸಿದ್ದಾರೆ ಎಂದು ಹೇಳಿದ್ದಾರೆ.

ಭಾರತದ ಜನರಿಗೆ ಕಷ್ಟಪಟ್ಟು ದುಡಿಯುವ ಅಭ್ಯಾಸವಿಲ್ಲ. ಯುರೋಪ್, ಯುಎಸ್, ಜಪಾನ್ ಮತ್ತು ಚೀನಾದ ಜನರಷ್ಟು ದುಡಿಯುವ ಆಸಕ್ತಿ ನಮಗಿಲ್ಲ. ಇದನ್ನು ನೆಹರೂ ಅವರು ಆಗಸ್ಟ್ 15 ರಂದು ಕೆಂಪು ಕೋಟೆಯಿಂದ ಹೇಳಿದ್ದರು. ಅಂದರೆ ನೆಹರೂ ಜಿ ಅವರು ಭಾರತೀಯರು ಸೋಮಾರಿಗಳು ಮತ್ತು ಕಡಿಮೆ ಬುದ್ಧಿವಂತರು ಎಂದು ಭಾವಿಸಿದ್ದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಿನ್ನಾಭಿಪ್ರಾಯಗಳಿಂದ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿರುಕು ಮೂಡಿದ ಬಗ್ಗೆ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ ಪ್ರಧಾನಿ, ಮೈತ್ರಿಕೂಟದ ಹೊಂದಾಣಿಕೆ ಅಲುಗಾಡಿದೆ. ಅವರು ಒಟ್ಟಿಗೆ ಬಂದರು. ಆದರೆ ಸ್ವಲ್ಪ ಸಮಯದಲ್ಲೇ ದೂರವಾಗುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...