ಈ ಹಿಂದೆ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಜಾಗತಿಕ ಮಟ್ಟದ ಪ್ರಭಾವಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿಯವರು, ಇದೀಗ ‘ಮಾರ್ನಿಂಗ್ ಕನ್ಸಲ್ಟ್’ ಸಮೀಕ್ಷೆಯಲ್ಲಿ ಜಗತ್ತಿನ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ್ದಾರೆ.
ಶೇಕಡಾ 76ರಷ್ಟು ಜನರ ಅನುಮೋದನೆ ರೇಟಿಂಗ್ ನೊಂದಿಗೆ ನರೇಂದ್ರ ಮೋದಿಯವರಿಗೆ ಈ ಪಟ್ಟ ಲಭಿಸಿದ್ದು, ಶೇಕಡಾ 61 ರಷ್ಟು ಅನುಮೋದನೆ ರೇಟಿಂಗ್ ನೊಂದಿಗೆ ಮೆಕ್ಸಿಕೋ ಅಧ್ಯಕ್ಷ ಅಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರೆಡಾರ್ ಎರಡನೇ ಹಾಗೂ ಶೇಕಡ 55ರಷ್ಟು ಅನುಮೋದನೆ ರೇಟಿಂಗ್ ನೊಂದಿಗೆ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬನಿಸ್ ಮೂರನೇ ಸ್ಥಾನದಲ್ಲಿದ್ದಾರೆ.
ಅಚ್ಚರಿಯ ಸಂಗತಿ ಎಂದರೆ ವಿಶ್ವದ ದೊಡ್ಡಣ್ಣ ಎಂಬ ಹಿರಿಮೆಗೆ ಪಾತ್ರರಾಗಿರುವ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಶೇ.41ರಷ್ಟು ಅನುಮೋದನೆ ರೇಟಿಂಗ್ ನೊಂದಿಗೆ 6ನೇ ಸ್ಥಾನದಲ್ಲಿದ್ದಾರೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಾಲ್ಕನೇ ಹಾಗೂ ಬ್ರೆಜಿಲ್ ಅಧ್ಯಕ್ಷ ಲೂಲಾ ಡಿಸಿಲ್ವಾ ಐದನೇ ಸ್ಥಾನದಲ್ಲಿದ್ದಾರೆ. ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಈ ಸಮೀಕ್ಷೆಯನ್ನು ನಡೆಸಿತ್ತು.