alex Certify ಹೆಚ್.ಡಿ. ದೇವೇಗೌಡರ 90 ನೇ ಹುಟ್ಟುಹಬ್ಬ: ಮೋದಿ ಸೇರಿ ಗಣ್ಯರಿಂದ ಶುಭಾಶಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್.ಡಿ. ದೇವೇಗೌಡರ 90 ನೇ ಹುಟ್ಟುಹಬ್ಬ: ಮೋದಿ ಸೇರಿ ಗಣ್ಯರಿಂದ ಶುಭಾಶಯ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಹಾರೈಸಿದ್ದಾರೆ.

ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜಕಾರಣಿ ಶ್ರೀ ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು. ಸರ್ವಶಕ್ತನು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ದಯಪಾಲಿಸಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ದೇವೇಗೌಡರಿಗೆ ಶುಭಕೋರಿದ್ದಾರೆ. ಹಿರಿಯ ನಾಯಕರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ಅವರಿಗೆ ಉತ್ತಮ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ನಮ್ಮ ನಾಡಿಗೆ ದೇವೇಗೌಡರ ಮಾರ್ಗದರ್ಶನ ಇನ್ನಷ್ಟು ದೀರ್ಘಕಾಲ ದೊರಕಲಿ ಎಂದು ಆಶಿಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ, ಭಾರತದ ಮಾಜಿ ಪ್ರಧಾನಮಂತ್ರಿಗಳು, ಮಣ್ಣಿನಮಗ, ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು ಹಾಗೂ ನನ್ನ ಗೌರವಪೂರ್ವಕ ಪ್ರಣಾಮಗಳು.

ಅಲ್ಪಕಾಲವಷ್ಟೇ ಅಧಿಕಾರದಲ್ಲಿದ್ದರೂ ಕರ್ನಾಟಕ ಮತ್ತು ಭಾರತಕ್ಕೆ ಆವಿಸ್ಮರಣೀಯ ಕೊಡುಗೆ ನೀಡಿದವರು ಇವರು. ಕಾಯಾ ವಾಚಾ, ಮನಸಾ ಜನರ ಉದ್ಧಾರಕ್ಕಾಗಿ ಶ್ರಮಿಸಿದ ಅವರು ಭಾರತದ ರಾಜಕೀಯ ಕರ್ಮಯೋಗಿ. ತೊಂಬತ್ತರ ಹರೆಯದಲ್ಲೂ ಜನರಪರ ಹೋರಾಟ ನಡೆಸುತ್ತಿರುವ ಧಣಿವರಿಯದ ಕಾಯಕಯೋಗಿ. ಸದಾ ನನ್ನ ಕೈಹಿಡಿದು ಮುನ್ನಡೆಸಿದ ಅವರು ನನ್ನ ಪಾಲಿಗೆ ತಂದೆಯಷ್ಟೇ ಅಲ್ಲ; ಗುರು, ದೈವ, ಶಕ್ತಿಯೂ ಹೌದು. ನನಗಷ್ಟೇ ಅಲ್ಲ, ಈ ನಾಡಿಗೆ, ದೇಶಕ್ಕೆ ಇನ್ನಷ್ಟು ದೀರ್ಘಕಾಲ ಅವರ ಸೇವೆ-ಮಾರ್ಗದರ್ಶನ ಅಗತ್ಯವಿದೆ. ಆ ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ಹಿರಿಯರು, ಮಾಜಿ ಪ್ರಧಾನಮಂತ್ರಿಗಳು,  ಆತ್ಮೀಯರಾದ ಶ್ರೀ ಹೆಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಕಾಮನೆಗಳು. ಭಗವಂತನ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...