ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮೇ 30 ಕ್ಕೆ ಎರಡು ವರ್ಷ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಧಿಕಾರ ನೀಡಿದ ಜನರಿಗೆ ಸೇವೆ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ಸಂಭ್ರಮಾಚರಣೆ ನಡೆಸದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ.
ಕೇಂದ್ರ ಮತ್ತು ರಾಜ್ಯದ ಸಚಿವರು ಎರಡು ಗ್ರಾಮಗಳಿಗೆ ಭೇಟಿ ನೀಡಬೇಕು. ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ ಗ್ರಾಮಸ್ಥರನ್ನು ಭೇಟಿಯಾಗಿ ಅವರಿಗೆ ಅಗತ್ಯವಿರುವ ರೇಷನ್, ಸ್ಯಾನಿಟೈಸರ್, ಮಾಸ್ಕ್, ಸೇರಿದಂತೆ ಇತರೆ ವೈದ್ಯಕೀಯ ಉಪಕರಣ, ದಿನಸಿ ಕೊಡಬೇಕು.
ಖುದ್ದಾಗಿ ಭೇಟಿ ನೀಡಲು ಸಾಧ್ಯವಾಗದಿದ್ದರೆ ಗ್ರಾಮಸ್ಥರೊಂದಿಗೆ ವಿಡಿಯೋ ಸಂವಾದ ನಡೆಸಬೇಕು. ಕನಿಷ್ಠ 1 ಲಕ್ಷ ಹಳ್ಳಿಗಳಿಗೆ ಪಕ್ಷದ ನಾಯಕರು ಭೇಟಿ ನೀಡಬೇಕು. ರಕ್ತದಾನ ಶಿಬಿರಗಳನ್ನು ಆಯೋಜಿಸಬೇಕು ಎಂದು ಹೇಳಲಾಗಿದೆ.