ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ.
ಈ ಮೂಲಕ ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ. 2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು. ಇನ್ನು ಕೇವಲ ಮೂರು ಬಜೆಟ್ ಮಂಡಿಸಿದರೆ ಒಟ್ಟು 11 ಬಜೆಟ್ ಮಂಡಿಸಿದ ಸಾರ್ವಕಾಲಿಕ ದಾಖಲೆ ಸೃಷ್ಟಿಸಲಿದ್ದಾರೆ. ಇದುವರೆಗೆ ವಿವಿಧ ಸರ್ಕಾರಗಳ ಅವಧಿಯಲ್ಲಿ 10 ಬಾರಿ ಬಜೆಟ್ ಮಂಡಿಸಿದ ಖ್ಯಾತಿಗೆ ಮಾಜಿ ಪ್ರಧಾನಿ ಮುರಾರ್ಜಿ ದೇಸಾಯಿ ಪಾತ್ರರಾಗಿದ್ದಾರೆ. ಉಳಿದಂತೆ ಪಿ. ಚಿದಂಬರಂ 9 ಬಾರಿ, ಪ್ರಣಬ್ ಮುಖರ್ಜಿ 8 ಬಾರಿ ಬಜೆಟ್ ಮಂಡಿಸಿದ್ದಾರೆ.