alex Certify ಸತತ ಮೂರನೇ ದಿನವೂ ಮೋದಿ ಅಬ್ಬರದ ಪ್ರಚಾರ: ಇಂದು ಬೆಂಗಳೂರು, ಶಿವಮೊಗ್ಗ, ನಂಜನಗೂಡಲ್ಲಿ ಕ್ಯಾಂಪೇನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸತತ ಮೂರನೇ ದಿನವೂ ಮೋದಿ ಅಬ್ಬರದ ಪ್ರಚಾರ: ಇಂದು ಬೆಂಗಳೂರು, ಶಿವಮೊಗ್ಗ, ನಂಜನಗೂಡಲ್ಲಿ ಕ್ಯಾಂಪೇನ್

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಬಿರುಗಾಳಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ರಾಜ್ಯದ ವಿವಿಧೆಡೆ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ.

ಬೆಂಗಳೂರು, ಶಿವಮೊಗ್ಗ, ನಂಜನಗೂಡಿನಲ್ಲಿ ಮೋದಿ ಪ್ರಚಾರ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿರುವ ಅವರು, ಬೆಳಗ್ಗೆ 11:30ಕ್ಕೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆಯಲಿರುವ ಬೃಹತ್ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4:25ಕ್ಕೆ ನಂಜನಗೂಡು ತಾಲೂಕಿನ ಯಲಚಗೇರೆ ಬೋರೆಗೆ ಆಗಮಿಸಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೈಸೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...