alex Certify ಬಿಜೆಪಿ ಅಭ್ಯರ್ಥಿಗೆ ಕ್ರಿಮಿನಲ್ ಹಿನ್ನೆಲೆ: ಮೋದಿ ಪ್ರಚಾರ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಅಭ್ಯರ್ಥಿಗೆ ಕ್ರಿಮಿನಲ್ ಹಿನ್ನೆಲೆ: ಮೋದಿ ಪ್ರಚಾರ ರದ್ದು

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ರಿಮಿನಲ್ ಹಿನ್ನೆಲೆ ಹೊಂದಿದ ಹಿನ್ನೆಲೆಯಲ್ಲಿ ವಿಪಕ್ಷಗಳಿಂದ ತೀವ್ರ ಟೀಕೆ ಎದುರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮೇ 6 ರಂದು ಚಿತ್ತಾಪುರದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆ ರದ್ದಾಗಿದೆ ಎಂದು ಹೇಳಲಾಗಿದೆ.

ಕ್ರಿಮಿನಲ್ ಹಿನ್ನೆಲೆಯ ಅನೇಕ ಪ್ರಕರಣ ಹೊಂದಿರುವ ಅಭ್ಯರ್ಥಿಗೆ ಟಿಕೆಟ್ ನೀಡಿದ ಬಗ್ಗೆ ವಿಪಕ್ಷಗಳು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದವು. ಈ ಹಿನ್ನೆಲೆಯಲ್ಲಿ ಮೇ 6ರಂದು ಚಿತ್ತಾಪುರ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆ ರದ್ದಾಗಿದೆ ಎಂದು ಹೇಳಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಚಿತ್ತಾಪುರ ಕ್ಷೇತ್ರದಲ್ಲಿ ಮೇ 6ರಂದು ನಡೆಸಲು ಉದ್ದೇಶಿಸಿದ್ದ ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆ ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಪ್ರಧಾನಿ ಮೋದಿ ರಾಜ್ಯ ಭೇಟಿಯ ವೇಳೆ ರೌಡಿ ಶೀಟರ್ ಗಳು ಕಾಣಿಸಿಕೊಂಡ ಬಗ್ಗೆ ಕಾಂಗ್ರೆಸ್ ನಾಯಕರು ಟೀಕಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...