alex Certify ನಾಳೆ ಮತ್ತೆ ರಾಜ್ಯಕ್ಕೆ ಮೋದಿ ಭೇಟಿ: ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಭರ್ಜರಿ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಮತ್ತೆ ರಾಜ್ಯಕ್ಕೆ ಮೋದಿ ಭೇಟಿ: ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಪ್ರಧಾನಿ ಮೋದಿ ಏ. 20ರಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಿ ಎನ್.ಡಿ.ಎ. ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ನಾಳೆ ಮಧ್ಯಾಹ್ನ 3:30ಕ್ಕೆ ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಬೆಂಗಳೂರು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿರುವ ಅವರು ಮಧ್ಯಾಹ್ನ 3.30 ರಿಂದ 4:30ರ ವರೆಗೆ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳ ಎನ್.ಡಿ.ಎ. ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.  ನಾಳೆ ಪ್ರಧಾನಿ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಸೇರಿ ಹಲವು ನಾಯಕರು ಭಾಗವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ನಾಳೆ ಮೋದಿ ಕಾರ್ಯಕ್ರಮ ಆಯೋಜನೆಗೊಂಡಿದೆ. ಅಗಲಗುರ್ಕಿ ಸಮೀಪ 50 ಎಕರೆ ಜಮೀನಿನಲ್ಲಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 44ಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ಬೆಂಗಳೂರಿನ ನಾಲ್ಕು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಸಮಾವೇಶಕ್ಕೆ ಬರುವವರಿಗಾಗಿ 60 ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗಿದೆ. 15000 ವಿವಿಐಪಿ ಪಾಸ್ ವಿತರಣೆ ಮಾಡಲಾಗಿದೆ. ಮಹಿಳೆಯರಿಗಾಗಿ 5000 ಪಿಂಕ್ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು ಸೆಂಟ್ರಲ್, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಕ್ಷೇತ್ರ ಅಭ್ಯರ್ಥಿಗಳ ಪರ ಮೋದಿ ಮತ ಯಾಚಿಸಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...