alex Certify ರಾಜ್ಯದಲ್ಲಿಂದು ಮತ್ತೆ ಮೋದಿ ಹವಾ: ಇಂದು, ನಾಳೆ ವಿವಿಧೆಡೆ ಅಬ್ಬರದ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಮತ್ತೆ ಮೋದಿ ಹವಾ: ಇಂದು, ನಾಳೆ ವಿವಿಧೆಡೆ ಅಬ್ಬರದ ಪ್ರಚಾರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಎರಡನೇ ಹಂತದ ಪ್ರಚಾರ ಕೈಗೊಂಡಿದ್ದಾರೆ.

ಇಂದು ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಕಲಬುರ್ಗಿ, ನಾಳೆ ಮೂಡಬಿದರೆ, ಅಂಕೋಲಾ, ಬೈಲಹೊಂಗಲದಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿರುವ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದು, ಸಂಜೆ 4 ಗಂಟೆಗೆ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸುವರು. 6.30 ಕ್ಕೆ ಕಲಬುರ್ಗಿಯಲ್ಲಿ ರೋಡ್ ಶೋ ನಡೆಸಿ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿರುವ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆಯುವ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...