ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ನಿನ್ನೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಪ್ರಚಾರ ನಡೆಸಿದ ಪ್ರಧಾನಿ ಮೋದಿ ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.
ಇಂದು ಪ್ರಧಾನಿ ಮೋದಿ ಬೆಳಗ್ಗೆ 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ಕ್ಷೇತ್ರ ವ್ಯಾಪ್ತಿಯ ಮುಲ್ಕಿಯಲ್ಲಿ ನಡೆಯುವ ಸಮಾವೇಶದಲ್ಲಿ ಮೋದಿ ಭಾಗವಹಿಸಲಿದ್ದು, ಮಧ್ಯಾಹ್ನ 12 ಗಂಟೆಗೆ ಉತ್ತರ ಕನ್ನಡ ಜಿಲ್ಲೆ ಕಾರವಾರ ಕ್ಷೇತ್ರ ವ್ಯಾಪ್ತಿಯ ಅಂಕೋಲದಲ್ಲಿ ಪ್ರಚಾರ ನಡೆಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ಮೋದಿ ಮತ ಬೇಟೆ ನಡೆಸಲಿದ್ದಾರೆ. ಮಂಗಳೂರು -ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಮುಲ್ಕಿ, ವಿಜಯ ಸನ್ನಿಧಿಯ ಬಳಿ ಎಡಕ್ಕೆ ಚಲಿಸಿ ಕಿನ್ನಿಗೋಳಿ, ಕಟೀಲು, ಬಜಪೆ, ಕಾವೂರು ಮೂಲಕ ಮಂಗಳೂರು ಕಡೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.