
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಪ್ರಚಾರ ಕೈಗೊಂಡಿದ್ದ ಮೋದಿ ದೇಶದ ಅನೇಕ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಕೈಮೀರಿದ ಹಿನ್ನಲೆಯಲ್ಲಿ ಎಲ್ಲಾ ರ್ಯಾಲಿಗಳನ್ನು ರದ್ದುಪಡಿಸಿದ್ದಾರೆ.
ನಾಳೆ ಕೊರೋನಾ ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದ್ದು, ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಕ್ರಮಕೈಗೊಳ್ಳಲಾಗುವುದು.
ಮೋದಿ ಅವರ ಪಶ್ಚಿಮಬಂಗಾಳ ರ್ಯಾಲಿಯನ್ನು ಕ್ಯಾನ್ಸಲ್ ಮಾಡಲಾಗಿದೆ. ನಾನು ಪಶ್ಚಿಮ ಬಂಗಾಳಕ್ಕೆ ಹೋಗುತ್ತಿಲ್ಲ. ಕೋವಿಡ್ ಪರಿಸ್ಥಿತಿ ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಲಿದ್ದೇನೆ ಎಂದು ಮೋದಿ ತಿಳಿಸಿದ್ದಾರೆ.