ಬೆಂಗಳೂರು : ‘ಕಾವೇರಿ’ ನದಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ನಮ್ಮಲ್ಲಿ ನೀರು ಹಂಚಿಕೆ ಹೇಗೆ ಆಗ್ಬೇಕು ಅಂತ ನಿರ್ಧಾರವಾಗಬೇಕು, ಪ್ರಧಾನ ಮೋದಿ ಇದರಲ್ಲಿ ಮಧ್ಯ ಪ್ರವೇಶಿಸಲು ಆಗಲ್ಲ ಎಂದರು. 2 ಪಕ್ಷಗಳು ಒಟ್ಟಾಗಿ ಸೇರಿದೆ, ನೀರು ಬಿಡದಂತೆ ಹೋರಾಟ ಮಾಡಬೇಕಿದೆ ಎಂದು ಹೇಳುವ ಮೂಲಕ ಹೆಚ್ಡಿಕೆ ಕರ್ನಾಟಕ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದರು.
ನಾನು ಯಾವುದೇ ಕಾರಣಕ್ಕೂ ಅಧಿಕಾರಕ್ಕಾಗಿ ರಾಜಕೀಯ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.10 ವರ್ಷಗಳಲ್ಲಿ ಮೊದಲ ಬಾರಿ ನಾನು ಮೈತ್ರಿ ಬಗ್ಗೆ ಮಾತನಾಡಿದ್ದೇನೆ. ಕಾಂಗ್ರೆಸ್ ಮೋಸ ಮಾಡಿರುವ 100 ಉದಾಹರಣೆಗಳನ್ನು ಕೊಡುವೆ, ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಾಗ ಏನ್ ಮಾಡಿದ್ರು ಗೊತ್ತಿಲ್ವಾ? ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಅವರು ಬಿಜೆಪಿ ನಾಯಕರನ್ನ ಭೇಟಿ ಆಗುವ ಮೊದಲು ಹೋಂ ಮಿನಿಸ್ಟರ್ ಬಳಿ ನಾನು ಚರ್ಚೆ ಮಾಡಿದ್ದೇನೆ. ಕದ್ದು ಮುಚ್ಚಿ ಮಾತನಾಡುವ ಅಗತ್ಯ ಇಲ್ಲ. ಕರ್ನಾಟಕ ಪರಿಸ್ಥಿತಿ ಏನಿದೆ ಅಂತ ಶಾ ಅವರತ್ರ ಎಲ್ಲಾ ವಿಚಾರ ಮಾತಾಡಿದ್ದೇನೆ ಎಂದರು.