ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಮೇ, 31 ರಂದು ವರ್ಚುವಲ್ ಮೂಲಕ ವಿಡಿಯೋ ಸಂವಾದ ನಡೆಯಲಿದೆ.
ಈ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದಲೂ ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ನಲ್ಲಿ ಮೇ, 31 ರಂದು ಬೆಳಗ್ಗೆ 9.30 ಗಂಟೆಗೆ ರಾಜ್ಯ ಮಟ್ಟದ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಾದ ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಪೋಷಣಾ ಅಭಿಯಾನ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಸ್ವಚ್ಛ ಭಾರತ ಅಭಿಯಾನ, ಪ್ರಧಾನಮಂತ್ರಿ ಸ್ವನಿಧಿ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ಆಯುಷ್ಮಾನ್ ಭಾರತ್ ಜನ ಆರೋಗ್ಯ ಯೋಜನೆ, ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕ್ಷೇಮ ಯೋಜನೆ, ಪ್ರಧಾನಮಂತ್ರಿ ಮುದ್ರಾ ಯೋಜನೆ ಈ ಯೋಜನೆಗಳ ಬಗ್ಗೆ ಪ್ರಧಾನಮಂತ್ರಿ ಅವರು ಆಯ್ದ ಫಲಾನುಭವಿಗಳ ಜೊತೆ ವರ್ಚುವಲ್ ಮೂಲಕ ವಿಡಿಯೊ ಸಂವಾದ ನಡೆಸಲಿದ್ದಾರೆ.
ಸಂವಾದ ಕಾರ್ಯಕ್ರಮದ ವೀಕ್ಷಣೆಗೆ ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.