
ನವದೆಹಲಿ: ಪ್ರಧಾನಿ ಮೋದಿ, ಆರೊಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ ತೀವ್ರ ಆತಂಕ ಮೂಡಿಸಿದೆ. ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಅನೇಕ ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆಯಿಂದ ಜನ ತತ್ತರಿಸಿಹೋಗಿದ್ದಾರೆ. ಈ ಕಾರಣದಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಇಂದು ಮಧ್ಯಾಹ್ನ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿರುವ ಮೋದಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಕೈ ಮೀರಿದ್ದು ಕೇಂದ್ರದಿಂದ ಎಚ್ಚರಿಕೆಯ ಪತ್ರ ಬರೆದು ತರಾಟೆಗೆ ತೆಗೆದುಕೊಳ್ಳಲಾಗಿದೆ.