
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ವಿವರಿಸಲಿದ್ದಾರೆ.
ಮೂರು ದಿನಗಳ ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಅವರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿನ ಬರ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿ ಪರಿಹಾರ ಒದಗಿಸುವ ಬಗ್ಗೆ ಮನವಿ ಮಾಡಲಿದ್ದಾರೆ.
ನರೇಗಾ ಯೋಜನೆ ಮಾನವ ದಿನಗಳನ್ನು ಹೆಚ್ಚಳ ಮಾಡುವಂತೆ ಕೋರುವ ಸಾಧ್ಯತೆ ಇದೆ. ಬರ ಪರಿಹಾರ ನೀಡದ ಮತ್ತು ಪ್ರಧಾನಿಯವರ ಭೇಟಿಗೆ ಸಮಯ ನೀಡದ ಬಗ್ಗೆ ಸಿಎಂ ಟೀಕಿಸಿಸಿದ್ದರು. ಇದೀಗ ಭೇಟಿಗೆ ಸಮಯ ನಿಗದಿಯಾಗಿದೆ. ನಾಳೆ ಪ್ರಧಾನಿ, ಸಿಎಂ ಭೇಟಿ ಆಗಲಿದ್ದಾರೆ.