
ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಪೆನ್ಸಿಲ್ವೇನಿಯಾದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದಾರೆ.
ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಸ್ಥಾನವಿಲ್ಲ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಮೃತರ ಕುಟುಂಬ, ಗಾಯಗೊಂಡವರು ಮತ್ತು ಅಮೇರಿಕನ್ ಜನರೊಂದಿಗೆ ನಾವಿದ್ದೇವೆ ಎಂದು ಮೋದಿ ತಿಳಿಸಿದ್ದಾರೆ.