ನವದೆಹಲಿ : ತಮಿಳು ನಟ, ಡಿಎಂಡಿಕೆ ನಾಯಕ ವಿಜಯ್‍ಕಾಂತ್ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಅವರು, ವಿಜಯ್‍ಕಾಂತ್ ಅವರ ನಿಧನ ಅತೀವ ದುಃಖ ತಂದಿದೆ. ತಮಿಳು ಚಲನಚಿತ್ರ ಪ್ರಪಂಚದ ದಂತಕಥೆಯಾಗಿರುವ ಅವರು ತಮ್ಮ ನಟನೆಯಿಂದಲೇ ಎಲ್ಲರ ಮನಗೆದ್ದಿದ್ದರು. ರಾಜಕೀಯ ನಾಯಕರಾಗಿ ಅವರು ಸಾರ್ವಜನಿಕ ಸೇವೆಗೆ ಬದ್ಧರಾಗಿದ್ದರು. ಇಂದು ಅವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಆತ್ಮೀಯ ಸ್ನೇಹಿತರಾಗಿದ್ದರು ಮತ್ತು ನಾನು ಅವರೊಂದಿಗಿನ ನನ್ನ ಸಂವಾದವನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಅವರ ಕುಟುಂಬ, ಅಭಿಮಾನಿಗಳು ಮತ್ತು ಹಲವಾರು ಅನುಯಾಯಿಗಳೊಂದಿಗೆ ಇದೆ. ಓಂ ಶಾಂತಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.