ನವದೆಹಲಿ: ಎರಡು ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆದಿರುವ ಅಂಚೆ ಇಲಾಖೆಯನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ
ಭಾರತೀಯ ಅಂಚೆ ಇಲಾಖೆಯಿಂದ ಎರಡು ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆದಿಯಲಾಗಿದೆ. ಈ ಹಿನ್ನಲೆಯಲ್ಲಿ ಇಂಡಿಯಾ ಪೋಸ್ಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, ಇದು ಹುಡುಗಿಯರ ಭವಿಷ್ಯವನ್ನು ಭದ್ರಪಡಿಸಲು ಮತ್ತು ಅವರನ್ನು ಸಬಲೀಕರಣಗೊಳಿಸಲು ಸಹಾಯ ಮಾಡುತ್ತದೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರ ಟ್ವೀಟ್ಗೆ ಉತ್ತರವಾಗಿ ಪ್ರಧಾನಿ ಈ ವಿಷಯ ತಿಳಿಸಿದ್ದಾರೆ.