
ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿಕೊಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ಶುಭಾಶಯಗಳು. ‘ಅವರಿಗೆ ಫಲಪ್ರದ ಅಧಿಕಾರ ಸಿಗಲಿ’ ಎಂದು ಹೇಳಿದ್ದಾರೆ.