alex Certify ಐದು ʻಏಮ್ಸ್ʼ ಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ, ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟಿನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐದು ʻಏಮ್ಸ್ʼ ಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ, ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟಿನೆ

ರಾಜ್ಕೋಟ್: ಗುಜರಾತ್ ನ ರಾಜ್ಕೋಟ್ ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರೋಗ್ಯ, ರಸ್ತೆ, ರೈಲು, ಇಂಧನ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಪ್ರವಾಸೋದ್ಯಮ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 48,100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.

ದೇಶದಲ್ಲಿ ತೃತೀಯ ಹಂತದ ಆರೋಗ್ಯ ರಕ್ಷಣೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು-

ರಾಜ್ ಕೋಟ್ (ಗುಜರಾತ್)

ಬಟಿಂಡಾ (ಪಂಜಾಬ್)

ರಾಯ್ಬರೇಲಿ (ಉತ್ತರ ಪ್ರದೇಶ)

ಕಲ್ಯಾಣಿ (ಪಶ್ಚಿಮ ಬಂಗಾಳ)

ಮಂಗಳಗಿರಿ (ಆಂಧ್ರಪ್ರದೇಶ)

ಪ್ರಧಾನಮಂತ್ರಿಯವರು 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 11,500 ಕೋಟಿ ರೂ.ಗೂ ಅಧಿಕ ಮೌಲ್ಯದ 200ಕ್ಕೂ ಹೆಚ್ಚು ಆರೋಗ್ಯ ರಕ್ಷಣಾ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.

ಹೊಸದಾಗಿ ಉದ್ಘಾಟಿಸಲಾದ ಯೋಜನೆಗಳು ಇಲ್ಲಿವೆ

ಪುದುಚೇರಿಯ ಕಾರೈಕಲ್ ನಲ್ಲಿರುವ ಜಿಪ್ಮರ್ ವೈದ್ಯಕೀಯ ಕಾಲೇಜು ಮತ್ತು ಪಂಜಾಬ್ ನ ಸಂಗ್ರೂರ್ ನಲ್ಲಿ ಸ್ನಾತಕೋತ್ತರ ವೈದ್ಯಕೀಯ ಮತ್ತು ಶೈಕ್ಷಣಿಕ ಸಂಶೋಧನಾ ಸಂಸ್ಥೆಯ (ಪಿಜಿಐಎಂಇಆರ್) 300 ಹಾಸಿಗೆಗಳ ಉಪಗ್ರಹ ಕೇಂದ್ರವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...