
ನವದೆಹಲಿ: ಮುಖ್ಯಮಂತ್ರಿಯಾಗಿ ಸಿಎಂ ಆಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು, ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.