alex Certify ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಬಲಪಡಿಸಿ: ಮೋದಿ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಬಲಪಡಿಸಿ: ಮೋದಿ ಕರೆ

ನವದೆಹಲಿ: ಮೂರು ರಾಜ್ಯಗಳಲ್ಲಿ ಇಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಉತ್ತರಪ್ರದೇಶದಲ್ಲಿ ಎರಡನೇ ಹಂತದಲ್ಲಿ 55 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಉತ್ತರಾಖಂಡ್ 70 ವಿಧಾನಸಭೆ ಕ್ಷೇತ್ರಗಳು ಮತ್ತು ಗೋವಾ ರಾಜ್ಯದ 40 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ.

ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದ್ದು. ಗರಿಷ್ಠ ಪ್ರಮಾಣದಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ಮತದಾನದಿಂದ ಪ್ರಜಾಪ್ರಭುತ್ವಕ್ಕೆ ಮತ್ತಷ್ಟು ಬಲ ಸಿಗುತ್ತದೆ. ಮತದಾನದ ಈ ಉತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಪ್ರಧಾನಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಇಂದು ಮತ ಚಲಾಯಿಸಲು ಅರ್ಹರಾಗಿರುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ನಾನು ಕರೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...