alex Certify ವಿದ್ಯಾರ್ಥಿಗಳಿಗೆ ಪರೀಕ್ಷೆ ಒತ್ತಡ ನಿವಾರಣೆಗೆ ಮೋದಿ ಟಿಪ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಪರೀಕ್ಷೆ ಒತ್ತಡ ನಿವಾರಣೆಗೆ ಮೋದಿ ಟಿಪ್ಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಕುರಿತಾಗಿ ಸಂವಾದ ನಡೆಸಿದ್ದು, ಹಲವು ಸಲಹೆ ನೀಡಿದ್ದಾರೆ.

ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಾದ ನಡೆಸಿ ಒತ್ತಡ ಮುಕ್ತ ಪರೀಕ್ಷೆ ಎದುರಿಸಲು ಮುಂದಾಗುವಂತೆ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಒತ್ತಡ ಮುಕ್ತ ಪರೀಕ್ಷೆಗಳಿಗೆ ಆದ್ಯತೆ ನೀಡಬೇಕಿದೆ. ಮಕ್ಕಳಿಗೆ ಪರೀಕ್ಷೆ ಬಗ್ಗೆ ಭಯವಿಲ್ಲ. ಆದರೆ, ಒತ್ತಡದಿಂದ ಭಯಗೊಳ್ಳುತ್ತಾರೆ. ಪೋಷಕರು, ಶಿಕ್ಷಕರು ಪರೀಕ್ಷೆಯ ಬಗ್ಗೆ ಸೂಕ್ತವಾದ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದ್ದಾರೆ.

ಪರೀಕ್ಷೆಗಳು ಜೀವನದ ಸವಾಲು ಎದುರಿಸಲು ಅವಕಾಶ ಇದ್ದಂತೆ. ವಿದ್ಯಾರ್ಥಿಗಳಿಗೆ ಬಯ್ಯುವ ಬದಲು ಶಿಕ್ಷಕರು ಮಾರ್ಗದರ್ಶನ ನೀಡಬೇಕು. ಮಕ್ಕಳು ತಮ್ಮ ಎನರ್ಜಿಯನ್ನು ಸಮಾನವಾಗಿ ಹಂಚಬೇಕು ಎಂದು ಹೇಳಿದ್ದಾರೆ.

ಪರೀಕ್ಷೆಗಳು ಜೀವನದ ಸವಾಲು ಎದುರಿಸಲು ಸಿಕ್ಕ ಅವಕಾಶವಾಗಿದೆ. ಪರೀಕ್ಷೆಯೇ ಜೀವನದ ಕೊನೆಯ ಅವಕಾಶವಲ್ಲ. ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ಭಯ ಬೇಡ, ಮಕ್ಕಳ ಮೇಲೆ ಹೆಚ್ಚು ಒತ್ತಡ ಹೇರಬಾರದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...