ಕರ್ನಾಟಕದ ಬಂಡೀಪುರ ರಾಷ್ಟ್ರೀಯ ಉದ್ಯಾನವನ, ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಆನೆಗಳಿಗೆ ಕಬ್ಬು ತಿನ್ನಿಸಿ, ಮಾವುತರೊಂದಿಗೆ ಸಂವಾದ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಗ್ಗೆ ಮೈಸೂರಿನಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಆಗಮಿಸಿದರು. 2 ಗಂಟೆ ಸಫಾರಿ ನಡೆಸಿದ ಅವರು ನಂತರ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದರು. ತೆಪ್ಪಕಾಡು ಆನೆ ಶಿಬಿರದಲ್ಲಿ ಮಾವುತರೊಂದಿಗೆ ಸಂವಾದ ನಡೆಸುತ್ತಿದ್ದ ಮೋದಿ ಆನೆಗಳಿಗೆ ಕಬ್ಬು ನೀಡಿದ್ದಾರೆ.