
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸತತ 9ನೇ ಬಾರಿಗೆ ಪ್ರಧಾನಿ ಮೋದಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಲಿದ್ದಾರೆ.
ಬೆಳಿಗ್ಗೆ 7:15ಕ್ಕೆ ಧ್ವಜಾರೋಹಣ ನೆರವೇರಿಸಲಿರುವ ಪ್ರಧಾನಿ ಬಳಿಕ ಹಲವು ಘೋಷಣೆಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಕೊರೋನಾ ಕಾರಣದಿಂದಾಗಿ ಸ್ವಾತಂತ್ರ್ಯ ದಿನಾಚರಣೆ ಕಳೆದ ಎರಡು ವರ್ಷಗಳಿಂದ ಸಂಭ್ರಮ ಕಳೆದುಕೊಂಡಿತ್ತು. ಈ ಬಾರಿ ದೇಶಾದ್ಯಂತ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದ್ದು, ಪ್ರಧಾನಿ ಮೋದಿ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.