
ಸೋಮವಾರ ರಷ್ಯಾಗೆ ಬಂದಿಳಿದ ಅವರನ್ನು ಉಪ ಪ್ರಧಾನಿ ಡೆನ್ನಿಸ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರ ಮಾಡಿಕೊಂಡಿದ್ದು, ಈ ಸಂದರ್ಭದಲ್ಲಿ ರಷ್ಯಾ ಕಲಾವಿದರು ರಾಜಸ್ತಾನಿ ಜಾನಪದ ಹಾಡು ಹಾಗೂ ನೃತ್ಯದ ಮೂಲಕ ಸ್ವಾಗತಿಸಿದ್ದಾರೆ. ಇದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಲ್ಲದೆ ರಷ್ಯಾದಲ್ಲಿ ಹಲವು ವರ್ಷಗಳಿಂದ ನೆಲೆಸಿರುವ ಭಾರತೀಯ ಸಮುದಾಯದವರು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಹರ್ಷ ವ್ಯಕ್ತಪಡಿಸಿದ್ದು, ಇದೇ ಸಂದರ್ಭದಲ್ಲಿ ಅಲ್ಲಿನ ಭಾರತೀಯ ದೂತವಾಸ ಕಚೇರಿ ಮೋದಿಯವರ ಜೊತೆಗೆ ಭಾರತೀಯ ಮೂಲದವರ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ.