ಸುದೀರ್ಘ ಕಾಲ ರಾಜ್ಯ ಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ನಿವೃತ್ತರಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಕಾರ್ಯ ವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ ಒಂದು ಹಂತದಲ್ಲಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಗುಲಾಂ ನಬಿ ಆಜಾದ್ ಕೇವಲ ತಮ್ಮ ಪಕ್ಷ ಅಥವಾ ನಾಯಕರನ್ನು ಮಾತ್ರ ನೋಡಲಿಲ್ಲ. ದೇಶಕ್ಕಾಗಿ ಅವರು ಕೆಲಸ ಮಾಡಿದರು ಎಂದು ಸ್ಮರಿಸಿಕೊಂಡರು.
ತಾವು ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಗುಜರಾತಿನ ಯಾತ್ರಾರ್ಥಿಗಳ ಮೇಲೆ ಉಗ್ರರ ದಾಳಿ ನಡೆದಿತ್ತು. ಈ ಸಂದರ್ಭದಲ್ಲಿ ಎರಡು ಮೂರು ಬಾರಿ ತಮಗೆ ಕರೆ ಮಾಡಿ ಸಂಪೂರ್ಣ ಮಾಹಿತಿ ನೀಡಿದ್ದಲ್ಲದೇ, ಮೃತಪಟ್ಟವರ ದೇಹಗಳನ್ನು ವಾಪಾಸ್ ತರಲು ನೆರವಾಗಿದ್ದರು ಎಂದರು.