alex Certify ಮಹದಾಯಿ ವಿವಾದ ಬಗೆಹರಿಸಲು ಇಂತಹ ಅವಕಾಶ ಮತ್ತೆ ಸಿಗಲ್ಲ: ಸತೀಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹದಾಯಿ ವಿವಾದ ಬಗೆಹರಿಸಲು ಇಂತಹ ಅವಕಾಶ ಮತ್ತೆ ಸಿಗಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಮಹದಾಯಿ ಬಗ್ಗೆ ಗೋವಾ ಸಿಎಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿ, ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಲಿ ಎಂದು ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆಸಿ ವಿವಾದ ಬಗೆಹರಿಸಲಿ. ನಮಗೆ ನ್ಯಾಯಯುತವಾಗಿ ಸಿಗಬೇಕಾದ ನೀರು ಸಿಗಬೇಕು ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ, ಗೋವಾ ಮತ್ತು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವೇ ಇದೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಮುತುವರ್ಜಿ ವಹಿಸಬೇಕು. ಮಹದಾಯಿ ವಿವಾದವನ್ನು ಬಗೆಹರಿಸಲು ಮುಂದಾಗಬೇಕು. ಗೋವಾ ಮುಖ್ಯಮಂತ್ರಿ ಮನವೊಲಿಸುವ ಪ್ರಯತ್ನವನ್ನು ಮಾಡಬೇಕು. ಇಂತಹ ಅವಕಾಶ ಮತ್ತೆ ಸಿಗುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...