ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಗಣ್ಯರು ಶುಭ ಕೋರಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರಿಗೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಹುಟ್ಟುಹಬ್ಬದ ಶುಭಾಶಯ ಸಂದೇಶ ಕಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿರುವ ನಿರ್ಮಲಾ ಸೀತಾರಾಮನ್ ಅವರಿಗೆ ದೀರ್ಘಾಯುಷ್ಯ ಕೋರುತ್ತೇನೆ ಎಂದಿದ್ದಾರೆ.
ಪ್ರಧಾನಿ ಮೋದಿಯವರಲ್ಲದೆ ಅವರ ಸಚಿವ ಸಂಪುಟದ ಸಹೋದ್ಯೋಗಿಗಳಾದ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್. ಜೈಶಂಕರ್, ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೊದಲಾದವರು ಕೂಡ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.