alex Certify BIG NEWS: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೂನ್ 9ರಂದು ನಡೆದ ಪ್ರಮಾಣವಚನ ಕಾರ್ಯಕ್ರಮದ ಅದ್ದೂರಿ ಸಮಾರಂಭಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಅನಾರೋಗ್ಯ ಕಾರಣದಿಂದ ಗೈರಾಗಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಿದ್ದರ ಬಗ್ಗೆ ವಿಚಾರಿಸಿದ್ದಾರೆ. ಇದೇ ವೇಳೆ ದೇವೇಗೌಡರ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...