ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಬೃಹತ್ ಆರೋಗ್ಯ ಸೇವೆಗೆ ಚಾಲನೆ ನೀಡಿದ್ದಾರೆ. 64 ಸಾವಿರ ಕೋಟಿ ರೂಪಾಯಿ ವೆಚ್ಚದ ಆಯುಷ್ಮಾನ್ ಆರೋಗ್ಯ ಮೂಲಸೌಕರ್ಯ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ದೇಶವ್ಯಾಪಿ ಯೋಜನೆ ಇದಾಗಿದ್ದು, ಆರೋಗ್ಯ ಮೂಲಸೌಕರ್ಯ ಬಲಪಡಿಸಲಾಗುತ್ತದೆ.
ಯೋಜನೆಯಲ್ಲಿ 17,788 ಗ್ರಾಮೀಣ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. 11,024 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು. 4 ವೈರಾಣು ಸಂಬಂಧಿ ರಾಷ್ಟ್ರೀಯ ಸಂಶೋಧನಾ ಸಂಸ್ಥೆಗಳ ಸ್ಥಾಪನೆ ಮಾಡಲಾಗುವುದು. 5 ಹೊಸ ಪ್ರಾದೇಶಿಕ ರೋಗ ನಿಯಂತ್ರಣ ಕೇಂದ್ರಗಳ ಸ್ಥಾಪನೆ, 9 ಜೀವ ಸುರಕ್ಷತೆ ಪ್ರಯೋಗಾಲಯಗಳ ಸ್ಥಾಪನೆ ಮಾಡಲಾಗುತ್ತದೆ.
ಇದರೊಂದಿಗೆ 5 ಲಕ್ಷಕ್ಕಿಂತ ಹೆಚ್ಚು ಜನರಿರುವ ಜಿಲ್ಲೆಗಳಲ್ಲಿ ತುರ್ತು ಆರೋಗ್ಯ ಸೌಲಭ್ಯ ಕಲ್ಪಿಸಲಾಗುವುದು. ಆರೋಗ್ಯ ವ್ಯವಸ್ಥೆಯಲ್ಲಿ ಎಲ್ಲ ಬಗೆಯ ರೋಗ ಪತ್ತೆ ಸೇವೆಗಳನ್ನು ಜನರಿಗೆ ಒದಗಿಸಲಾಗುವುದು ಎಂದು ಹೇಳಲಾಗಿದೆ.