ಮಾರ್ಚ್ 7 ರೊಳಗೆ 5 ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕುರಿತಾಗಿ ಪ್ರಧಾನಿ ಮೋದಿ ಸುಳಿವು ನೀಡಿದ್ದಾರೆ.
ಅಸ್ಸಾಂನ ಧೆಮಾಜಿ ಜಿಲ್ಲೆಯ ಸಿಲಾಪಥರ್ ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೊನೆಯ ಬಾರಿಗೆ 2016 ರ ಮಾರ್ಚ್ 4 ರಂದು ರಲ್ಲಿ ವಿಧಾನಸಭೆ ಚುನಾವಣೆ ದಿನಾಂಕಗಳನ್ನು ಘೋಷಿಸಲಾಗಿತ್ತು. ಈ ವರ್ಷವೂ ಮಾರ್ಚ್ 7 ರೊಳಗೆ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಚುನಾವಣಾ ಆಯೋಗ ಚುನಾವಣೆ ದಿನಾಂಕವನ್ನು ಪ್ರಕಟಿಸುತ್ತದೆ. ನಾನು ಅಸ್ಸಾಂ, ಪಶ್ಚಿಮಬಂಗಾಳ, ಪುದುಚೇರಿ, ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆ ನಡೆಯಲಿರುವ 5 ರಾಜ್ಯಗಳಲ್ಲಿ ಪ್ರಚಾರದಲ್ಲಿ ಭಾಗಿಯಾಗಲಿರುವ ಬಗ್ಗೆ ಮತ್ತು ಆಯೋಗ ಚುನಾವಣೆ ಘೋಷಣೆ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.
ಈಗಾಗಲೇ ಚುನಾವಣಾ ಆಯೋಗದಿಂದ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.