ನವದೆಹಲಿ: ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ, ಕೊರೋನಾ ನೋವು ನಮ್ಮನ್ನು ಯಾವಾಗಲೂ ಕಾಡುತ್ತಿದೆ ಎಂದು ಹೇಳಿದ್ದಾರೆ.
ಭಾರತ ಲಸಿಕೆಗಾಗಿ ಅವಲಂಬಿತರಾಗಬಾರದು. ಬೇರೆ ದೇಶಗಳ ಮೇಲೆ ಅವಲಂಬಿತವಾಗಬಾರದು. ವಿಶ್ವದ ದೊಡ್ಡ ಲಸಿಕಾ ಅಭಿಯಾನ ಭಾರತದಲ್ಲಿ ನಡೆಯುತ್ತಿದೆ. ಇದನ್ನು ಹೆಮ್ಮೆಯಿಂದ ಹೇಳುತ್ತೇನೆ ಎಂದು ಮೋದಿ ಹೇಳಿದ್ದಾರೆ.
54 ಕೋಟಿ ಜನ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಕಡಿಮೆ ಜನರಿಗೆ ಸೋಂಕು ತಗುಲಿದೆ. ನಮ್ಮಿಂದ ಬಹಳಷ್ಟು ಜನರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಕೊರೊನಾದಿಂದ ಎಷ್ಟೋ ಮಕ್ಕಳು ಅನಾಥರಾಗಿದ್ದಾರೆ. ಕೊರೋನಾ ಮಹಾಮಾರಿ ನಮಗೆ ದೊಡ್ಡ ಸವಾಲಾಗಿದೆ. ಕೊರೋನಾ ನೋವು ನಮ್ಮನ್ನು ಯಾವಾಗಲೂ ಕಾಡುತ್ತಿದೆ ಭಾರತ ವಿಕಾಸ ಯಾತ್ರೆಯಲ್ಲಿ ಹೊಸ ಸಂಕಲ್ಪಗಳೊಂದಿಗೆ ನಾವು ಮುನ್ನಡೆಯಬೇಕಾಗಿದೆ. ಮುಂದಿನ 25 ವರ್ಷಗಳ ನಂತರ ಸ್ವಾತಂತ್ರ್ಯೋತ್ಸವದ ಶತಮಾನೋತ್ಸವ ಆಚರಣೆ ನಡೆಯಲಿದೆ ಎಂದರು.
‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಶ್ರದ್ಧೆಯೊಂದಿಗೆ ನಾವೆಲ್ಲ ಜೊತೆಯಾಗಿದ್ದೇವೆ. ಇದರೊಂದಿಗೆ ‘ಸಬ್ ಕಾ ಪ್ರಯಾಸ್’ ಘೋಷಣೆಯೂ ನಮ್ಮದಾಗಬೇಕಿದೆ. ಹೊಸ ಸಂಕಲ್ಪಗಳೊಂದಿಗೆ ನಾವು ಮುನ್ನಡೆಯಬೇಕಿದೆ. ಗ್ರಾಮಗಳಲ್ಲಿ ಶೇಕಡ 100 ರಷ್ಟು ರಸ್ತೆ, ಬ್ಯಾಂಕ್ ಖಾತೆ, ಆಯುಷ್ಮಾನ್ ಕಾರ್ಡ್, ಉಜ್ವಲ ಯೋಜನೆ, ವಿಮಾ ಯೋಜನೆ, ಪಿಂಚಣಿ ಯೋಜನೆ, ವಸತಿ ಯೋಜನೆ ಜನರಿಗೆ ತಲುಪಬೇಕು. ಸರ್ಕಾರಿ ಯೋಜನೆಗಳ ವೇಗ ಮೊದಲಿಗಿಂತ ಹೆಚ್ಚು ವೇಗವಾಗಿ ಜನರಿಗೆ ತಲುಪುತ್ತಿವೆ ಎಂದು ಹೇಳಿದ್ದಾರೆ.