ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ಬಂಪರ್ ಸುದ್ದಿ ನೀಡಿದ್ದಾರೆ. ಮುಂದಿನ ಒಂದೂವರೆ ವರ್ಷದಲ್ಲಿ ಸರ್ಕಾರದ ವಿವಿಧ ಇಲಾಖೆಗಳಿಗೆ 10 ಲಕ್ಷ ಮಂದಿಯನ್ನು ನೇಮಕ ಮಾಡಿಕೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದ್ದಾರೆ.
ಈ ಕುರಿತಂತೆ ಪ್ರಧಾನಮಂತ್ರಿ ಕಾರ್ಯಾಲಯದಿಂದ ಟ್ವೀಟ್ ಮೂಲಕ ಮಾಹಿತಿ ನೀಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದ ಸಚಿವಾಲಯ ಹಾಗೂ ಇಲಾಖೆಗಳ ಮುಖ್ಯಸ್ಥರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.
ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಪ್ರಧಾನಿಯವರ ಗಮನಕ್ಕೆ ಬಂದಿದ್ದು, ಹೀಗಾಗಿ ನೇಮಕಕ್ಕೆ ಮುಂದಾಗುವಂತೆ ಆದೇಶ ನೀಡಿದ್ದಾರೆ. ಇದನ್ನು ನಿಗದಿತ ಅವಧಿಯೊಳಗೆ ಮುಗಿಸುವಂತೆಯೂ ಪ್ರಧಾನಿ ನರೇಂದ್ರ ಮೋದಿಯವರು ಸೂಚನೆ ನೀಡಿದ್ದಾರೆ.