alex Certify ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿ: ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗಿಗಳ ನೇಮಕಕ್ಕೆ ಪ್ರಧಾನಿ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿ: ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗಿಗಳ ನೇಮಕಕ್ಕೆ ಪ್ರಧಾನಿ ಸೂಚನೆ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ಬಂಪರ್ ಸುದ್ದಿ ನೀಡಿದ್ದಾರೆ. ಮುಂದಿನ ಒಂದೂವರೆ ವರ್ಷದಲ್ಲಿ ಸರ್ಕಾರದ ವಿವಿಧ ಇಲಾಖೆಗಳಿಗೆ 10 ಲಕ್ಷ ಮಂದಿಯನ್ನು ನೇಮಕ ಮಾಡಿಕೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದ್ದಾರೆ.

ಈ ಕುರಿತಂತೆ ಪ್ರಧಾನಮಂತ್ರಿ ಕಾರ್ಯಾಲಯದಿಂದ ಟ್ವೀಟ್ ಮೂಲಕ ಮಾಹಿತಿ ನೀಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದ ಸಚಿವಾಲಯ ಹಾಗೂ ಇಲಾಖೆಗಳ ಮುಖ್ಯಸ್ಥರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.

ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಪ್ರಧಾನಿಯವರ ಗಮನಕ್ಕೆ ಬಂದಿದ್ದು, ಹೀಗಾಗಿ ನೇಮಕಕ್ಕೆ ಮುಂದಾಗುವಂತೆ ಆದೇಶ ನೀಡಿದ್ದಾರೆ. ಇದನ್ನು ನಿಗದಿತ ಅವಧಿಯೊಳಗೆ ಮುಗಿಸುವಂತೆಯೂ ಪ್ರಧಾನಿ ನರೇಂದ್ರ ಮೋದಿಯವರು ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...