ನವದೆಹಲಿ: 2024ರ ಜನವರಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ ಎಂದು ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಬುಧವಾರ ತಿಳಿಸಿದ್ದಾರೆ.
ಗಣರಾಜ್ಯೋತ್ಸವದ ಸಮಯದಲ್ಲಿ ಭಾರತವು ಕ್ವಾಡ್ ಶೃಂಗಸಭೆಯನ್ನು ಆಯೋಜಿಸುವ ಬಗ್ಗೆ ರಾಜತಾಂತ್ರಿಕ ವಲಯಗಳಲ್ಲಿ ಸಾಕಷ್ಟು ಊಹಾಪೋಹಗಳಿದ್ದರೂ, ಜನವರಿಯಲ್ಲಿ ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಯುಎಸ್ ಗುಂಪಿನ ಸಭೆ ನಡೆಯಲಿದೆಯೇ ಎಂದು ಗಾರ್ಸೆಟ್ಟಿ ಖಚಿತಪಡಿಸಲಿಲ್ಲ.
ಥಿಂಕ್ ಟ್ಯಾಂಕ್‌ನಲ್ಲಿ ನಡೆದ ಕಾರ್ಯಕ್ರಮದ ಅಂಚಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಾರ್ಸೆಟ್ಟಿ, ಸೆಪ್ಟೆಂಬರ್‌ನಲ್ಲಿ ಜಿ 20 ಶೃಂಗಸಭೆಯ ಅಂಚಿನಲ್ಲಿ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಲು ಪ್ರೆಸಿಡೆಬ್ಟ್ ಬಿಡೆನ್ ಅವರಿಗೆ ಪ್ರಧಾನಿ ಮೋದಿ ಆಹ್ವಾನ ನೀಡಿದರು ಎಂದು ಮಾಹಿತಿ ನೀಡಿದ್ದಾರೆ.
ಬಿಡೆನ್ ಆಹ್ವಾನವನ್ನು ಸ್ವೀಕರಿಸಿದರೆ, 2015 ರಲ್ಲಿ ಆಹ್ವಾನಿತ ಬರಾಕ್ ಒಬಾಮಾ ನಂತರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವ ಎರಡನೇ ಯುಎಸ್ ಅಧ್ಯಕ್ಷರಾಗಲಿದ್ದಾರೆ.
ಅಧ್ಯಕ್ಷರಾದ ನಂತರ ಬಿಡೆನ್ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ತಮ್ಮ ಮೊದಲ ಭೇಟಿ ನೀಡಿದ್ದರು.