ಆಗಸ್ಟ್ 15 ಸ್ವಾತಂತ್ರ್ಯ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೆಂಪು ಕೋಟೆಯಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಏನು ಮಾತನಾಡಬೇಕು ಎಂಬ ಬಗ್ಗೆ ನೀವು ಸಲಹೆ ನೀಡಬಹುದು. ಈ ಬಗ್ಗೆ ನರೇಂದ್ರ ಮೋದಿ ಜನರ ಅಭಿಪ್ರಾಯ ಕೇಳಿದ್ದಾರೆ. ನಿಮ್ಮ ಅಭಿಪ್ರಾಯವನ್ನು @Mygovindia ನಲ್ಲಿ ನೀವು ಹಂಚಿಕೊಳ್ಳಬಹುದು.
ಪ್ರಧಾನ ಮಂತ್ರಿ ಕಚೇರಿ ಈ ಬಗ್ಗೆ ಟ್ವಿಟ್ ಮಾಡಿ, ಜನರ ಅಭಿಪ್ರಾಯ ಕೇಳಿದೆ. ಈ ಟ್ವಿಟ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ. ಟ್ವಿಟ್ ಮಾಡಿ 10 ನಿಮಿಷದಲ್ಲೇ 700ಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ಅನೇಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಪಿಎಂಒನ ಟ್ವೀಟ್‌ನಲ್ಲಿ https://www.mygov.in/ ನ ಲಿಂಕ್ ಹಂಚಿಕೊಳ್ಳಲಾಗಿದೆ. ಇಲ್ಲಿ ಲಾಗ್ ಇನ್ ಮಾಡುವ ಮೂಲಕ ನಿಮ್ಮ ಅಭಿಪ್ರಾಯವನ್ನು ನೀಡಬಹುದು.
ಪ್ರತಿ ವರ್ಷ ಆಗಸ್ಟ್ 15 ರಂದು ಪ್ರಧಾನಿ ಕೆಂಪು ಕೋಟೆಯಲ್ಲಿ ಮಾತನಾಡುತ್ತಾರೆ. ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳನ್ನು ವಿವರಿಸುತ್ತಾರೆ. ಕಳೆದ ಕೆಲ ವರ್ಷಗಳಿಂದ ಪ್ರಧಾನ ಮಂತ್ರಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣಕ್ಕಾಗಿ ನಾಗರಿಕರಿಂದ ನೇರ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಆಹ್ವಾನಿಸುತ್ತಿದ್ದಾರೆ. ಈ ಬಾರಿಯೂ ಹೊಸ ಭಾರತಕ್ಕೆ ಕೊಡುಗೆ ನೀಡುವಂತೆ ನಾಗರಿಕರನ್ನು ಕೇಳಿಕೊಂಡಿದ್ದಾರೆಂದು Mygovನಲ್ಲಿ ಹೇಳಲಾಗಿದೆ.